Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಇಚ್ಲಂಪಾಡಿ ಹಿರಿಯ ಬುನಾದಿ ಶಾಲೆಯಲ್ಲಿ ಜಾಗತಿಕ ಕೈತೊಳೆಯುವ ದಿನಾಚರಣೆ

 

ಕಳತ್ತೂರು: ಇಚ್ಲಂಪಾಡಿ ಹಿರಿಯ ಬುನಾದಿ ಶಾಲೆಯಲ್ಲಿ ಜಾಗತಿಕ ಕೈತೊಳೆಯುವ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಆಚಾರ್ಯ ಉಪಸ್ಥಿತರಿದ್ದರು. ಆರೋಗ್ಯ ಇಲಾಖೆಯ ಜೂನಿಯರ್ ಹೆಲ್ತ್ ಇನ್‌ಸ್ಪೆಕ್ಟರ್ ಆದೇಶ್ ಎಂ.ವಿ. ಅವರು ‘ಶುಚಿಯಾದ ಕೈಗಳಿಂದ ಆರೋಗ್ಯಪೂರ್ಣ ಜೀವನ’ ಎಂಬ ವಿಷಯದ ಕುರಿತು ಮಾತನಾಡಿ, ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ವಿವರಿಸಿದರು.

ಸರಿಯಾದ ವಿಧಾನದಲ್ಲಿ ಕೈಗಳನ್ನು ತೊಳೆಯುವುದರಿಂದ ರೋಗಗಳ ಹರಡುವಿಕೆಯನ್ನು ತಡೆಗಟ್ಟಬಹುದು ಎಂದು ತಿಳಿಸಿದ ಅವರು, ಕೈತೊಳೆಯುವ ಸರಿಯಾದ ಕ್ರಮವನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. 

ಶಿಕ್ಷಕಿ ಸುಕೇಶಿನಿ ಸ್ವಾಗತಿಸಿದರು. ಶಿಕ್ಷಕ ಮುರಳೀಧರ ವಂದಿಸಿದರು. ಶಿಕ್ಷಕ ಮಂಜುನಾಥ್ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments

ಜಾಹೀರಾತು

Responsive Advertisement