Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬದಿಯಡ್ಕದಲ್ಲಿ ಸೌದೆ ಡಿಪ್ಪೊಗೆ ಬೆಂಕಿಯಿಟ್ಟು ಕಿಡಿಗೇಡಿ ಕೃತ್ಯ : 3 ಲಕ್ಷ ರೂ ನಾಶ ನಷ್ಟ ಶಂಕೆ : ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ಸಮೀಪದ ಕಾನತ್ತಿಲದಲ್ಲಿರುವ ಸೌದೆ ಡಿಪೋಗೆ ದುಷ್ಕರ್ಮಿಯೊಬ್ಬ ಬೆಂಕಿ ಹಚ್ಚಿದ ಘಟನೆ ಇಂದು ಮುಂಜಾನೆ 4.30ರ ಸುಮಾರಿಗೆ ನಡೆದಿದೆ. ಕಾನತ್ತಿಲದ ಮೊಹಮ್ಮದ್ ಎಂಬವರ ಮಾಲೀಕತ್ವದ ಡಿಪೋದಲ್ಲಿ ಸಂಗ್ರಹಿಸಿಟ್ಟಿದ್ದ ಸೌದೆಗಳಿಗೆ  ಅಪರಿಚಿತ ವ್ಯಕ್ತಿಯೊಬ್ಬ ರಸ್ತೆ ಮೂಲಕ ನಡೆದುಕೊಂಡು ಬಂದು ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೆಂಕಿಯಿಂದ ಡಿಪೋದಲ್ಲಿ ಸಂಗ್ರಹಿಸಿಟ್ಟಿದ್ದ  ಹಲವು ವಸ್ತುಗಳು ಸುಟ್ಟುಹೋಗಿವೆ. ಘಟನೆಯಿಂದ ಸುಮಾರು 3 ಲಕ್ಷ ರೂ. ನಷ್ಟವಾಗಿರುವುದಾಗಿ ಡಿಪೋ ಮಾಲೀಕ ಮೊಹಮ್ಮದ್ ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಬದಿಯಡ್ಕ ಪೊಲೀಸರು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement