ನೆಲ್ಯಾಡಿ : ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಸಮೀಪ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪುತ್ತೂರಿನ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ ಅಶ್ವಿನ್ ಜೋಜೋ ಜೋರ್ಜ್ ಮೃತಪಟ್ಟ ವಿದ್ಯಾರ್ಥಿ.
ಗುರುವಾರ ಮುಂಜಾನೆ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಅಶ್ವಿನ್ ಚಲಾಯಿಸುತ್ತಿದ್ದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ತೀವ್ರವಾಗಿ ಗಾಯಗೊಂಡ ಅಶ್ವಿನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

0 Comments