Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸುರತ್ಕಲ್‌ನಲ್ಲಿ ಶಾಲಾ ಬಸ್‌ಗೆ ಟೂರಿಸ್ಟ್ ಬಸ್ ಡಿಕ್ಕಿ: 13 ವಿದ್ಯಾರ್ಥಿಗಳಿಗೆ ಗಾಯ


ಸುರತ್ಕಲ್: ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಬಸ್‌ಗೆ ಟೂರಿಸ್ಟ್ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಕೊಲ್ನಾಡು ಸುಂದರ ರಾಮ್ ಶೆಟ್ಟಿ ಕನ್ವೆನ್ಷನ್ ಹಾಲ್ ಎದುರು ನಡೆದಿದೆ.

ಘಟನೆಯ ವೇಳೆ ಶಾಲಾ ಬಸ್‌ನಲ್ಲಿ 16 ಮಕ್ಕಳು ಇದ್ದರು. ಈ ಪೈಕಿ 13 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಬಸ್ ಕೊಲ್ನಾಡು ಸುಂದರ ರಾಮ್ ಶೆಟ್ಟಿ ಕನ್ವೆನ್ಷನ್ ಹಾಲ್ ಎದುರಿನ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತು ಮಕ್ಕಳನ್ನು ಇಳಿಸುತ್ತಿತ್ತು. ಈ ವೇಳೆ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ಖಾಸಗಿ ಟೂರಿಸ್ಟ್ ಬಸ್ ಶಾಲಾ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಶಾಲಾ ಬಸ್ ರಸ್ತೆಯ ಪಕ್ಕದಲ್ಲಿದ್ದ ಹೊಂಡಕ್ಕೆ ಬಿದ್ದಿದ್ದು, ಅದರಲ್ಲಿದ್ದ 13 ಮಕ್ಕಳು ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ಗಾಯಗೊಂಡ ಮಕ್ಕಳನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ಟೂರಿಸ್ಟ್ ಬಸ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Post a Comment

0 Comments

ಜಾಹೀರಾತು

Responsive Advertisement