ಉಡುಪಿ: ನಗರದ ಕಿನ್ನಿಮೂಲ್ಕಿ ಡೆಲಿಮಾ ಲೇಔಟ್‌ನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.
ಮನೆಯೊಂದರಲ್ಲಿ ವಿಶೇಷ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಹೆಚ್ಚುವರಿಯಾಗಿ ತಂದು ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.
ಈ ವೇಳೆ ಅಡುಗೆ ಕೆಲಸದಲ್ಲಿ ತೊಡಗಿದ್ದ ವ್ಯಕ್ತಿಗೆ ಬೆಂಕಿ ತಗುಲಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

0 Comments