Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ವಿಧಾನಸೌಧ ಸ್ಫೋಟದ ನಕಲಿ AI ವಿಡಿಯೋ: ಬಿಹಾರ ಮೂಲದ ಕಾರ್ಮಿಕನ ಬಂಧನ

ಬೆಂಗಳೂರು : ಕೃತಕ ಬುದ್ಧಿಮತ್ತೆ (AI) ಬಳಸಿ ವಿಧಾನಸೌಧದಲ್ಲಿ ಬಾಂಬ್ ಸ್ಫೋಟಗೊಂಡಂತೆ ನಕಲಿ ವಿಡಿಯೋ ಸೃಷ್ಟಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ಆರೋಪದ ಮೇಲೆ ಬಿಹಾರ ಮೂಲದ 25 ವರ್ಷದ ಅಲಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪೈಪ್ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದು, ಅಕ್ಟೋಬರ್ 20ರಂದು ವಿಡಿಯೋ ಅಪ್‌ಲೋಡ್ ಮಾಡಿದ್ದ ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾ ವೇಳೆ ವಿಡಿಯೋ ಪತ್ತೆಯಾಗಿದ್ದು, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಕಲಿ ವಿಡಿಯೋ ಸೃಷ್ಟಿಸಿದ ಉದ್ದೇಶ ಹಾಗೂ ಇದರ ಹಿಂದೆ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement