Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರು

ಕಡಬ: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಮೂಲದ ಆರೋಪಿ ಐದು ವರ್ಷಗಳ ಬಳಿಕ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಮಹಾರಾಷ್ಟ್ರ ಮೂಲದ ವಿಶಾಲ್ ಪೊಂಕೆ (30) ನ್ಯಾಯಾಲಯಕ್ಕೆ ಹಾಜರಾದ ಆರೋಪಿ. ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ. ಈ ಪ್ರಕರಣಗಳಲ್ಲಿ ದೊಡ್ಡಬಳ್ಳಾಪುರದ ನರಸಿಂಹ ಅಲಿಯಾಸ್ ರಾಜು, ಮಹಾರಾಷ್ಟ್ರದ ವಿಜಯ್ ಸುರೇಶ್ ಪೊಂಕೆ, ನವೀನ್ ಚಂದ್ರ ಸಿಂಗ್, ಉತ್ತರ ಕನ್ನಡದ ಚಂದ್ರಕಾಂತ್ ಪೂಜಾರಿ ಹಾಗೂ ಮಂಡ್ಯದ ಪ್ರಕಾಶ್ ಬಹದ್ದೂರ್ ಎಂಬವರಿಗೆ ಈಗಾಗಲೇ ಪುತ್ತೂರಿನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಇದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಶಾಲ್ ಪೊಂಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಪೊಲೀಸರು ಪ್ರಯತ್ನ ನಡೆಸಿದ್ದು, ನ್ಯಾಯಾಲಯದಿಂದ ಬಂಧನದ ಆದೇಶ ಹೊರಡಿಸಲಾಗಿತ್ತು.

2026ರ ಅಕ್ಟೋಬರ್ 30ರಂದು ಆರೋಪಿ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ. ಪುತ್ತೂರಿನ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ (ಕಡಬ ಸಂಚಾರಿ ನ್ಯಾಯಾಲಯ) ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ವಿಶಾಲ್ ಪೊಂಕೆ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ನಿಗಾ ದಾಖಲೆ(MOB)ಯನ್ನೂ ತೆರೆಯಲಾಗಿದೆ. ಅಲ್ಲದೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣವೊಂದರಲ್ಲಿಯೂ ಈತ ಆರೋಪಿಯಾಗಿದ್ದು, ವಿಚಾರಣೆ ನಡೆಯುತ್ತಿದೆ.

Post a Comment

0 Comments

ಜಾಹೀರಾತು

Responsive Advertisement