ಆದೂರು : ಕಾಡುಪ್ರಾಣಿಯನ್ನು ಕಂಡು ಸ್ಕೂಟರ್ ತಿರುಗಿಸಲು ಯತ್ನಿಸಿದಾಗ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಕೂಟರ್ ಸವಾರನ ವಿರುದ್ಧ ಆದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕರಿವೆಡಕಂ ತಂಗತ್ತಡ್ಕದ ಅಮಲ್ ರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಳೆದ ತಿಂಗಳ 21ರಂದು ಮುಂಜಾನೆ ಬೋವಿಕ್ಕಾನ-ಇರಿಯಣ್ಣಿ ರಸ್ತೆಯ ಮಂಜಕ್ಕಲ್ಲಿನಲ್ಲಿ ಅಪಘಾತ ಸಂಭವಿಸಿತ್ತು.
ಕರಿವೆಡಕಂ ತಂಗತ್ತಡ್ಕದ ವಿ.ಆರ್. ಜಿತಿನ್ (19) ಗಂಭೀರವಾಗಿ ಗಾಯಗೊಂಡಿದ್ದರು. ಕಾಡುಪ್ರಾಣಿ ರಸ್ತೆ ದಾಟುತ್ತಿದ್ದಾಗ ಅದನ್ನು ತಪ್ಪಿಸಲು ಯತ್ನಿಸಿದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿರುವುದಾಗಿ ವಿದ್ಯಾರ್ಥಿನಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಅಪಘಾತದಲ್ಲಿ ಅಮಲ್ ರಾಜ್ ಅವರಿಗೂ ಗಾಯಗಳಾಗಿದ್ದವು. ಮಂಗಳೂರಿನ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯನ್ನು ರೈಲು ನಿಲ್ದಾಣಕ್ಕೆ ಬಿಡಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು. ಗಾಯಗೊಂಡ ವಿದ್ಯಾರ್ಥಿನಿ ಕಳೆದ ಒಂದು ತಿಂಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

0 Comments