Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಿಟಕಿಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಬಿಗಿದು ಬಾಲಕ ದಾರುಣ ಸಾವು

ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿ ಮನೆಯಲ್ಲಿ ಆಟವಾಡುತ್ತಿದ್ದ ಒಂಬತ್ತು ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು  ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತ ಬಾಲಕನನ್ನು ಕುಕ್ಕಿಪಾಡಿಯ ಹೋಟೆಲ್ ಕಾರ್ಮಿಕ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ ಸುಮಾರು 9 ಗಂಟೆಗೆ ಅಮೃತ್ ಮನೆಯ ಕಿಟಕಿ ಬಳಿ ಒಬ್ಬನೇ ಆಟವಾಡುತ್ತಿದ್ದ. ಈ ವೇಳೆ ಕಿಟಕಿಗೆ ಕಟ್ಟಿದ್ದ ಸ್ಕಿಪ್ಪಿಂಗ್ ಹಗ್ಗ ಆತನ ಕುತ್ತಿಗೆಗೆ ಸಿಲುಕಿ ಬಿಗಿದಿದೆ ಎನ್ನಲಾಗಿದೆ. ಅಡುಗೆ ಮನೆಯಲ್ಲಿದ್ದ ತಾಯಿ ಇದನ್ನು ಗಮನಿಸಿ ಕಿರುಚಿಕೊಂಡಿದ್ದಾರೆ. ತಕ್ಷಣ ಪಕ್ಕದ ಮನೆಯಲ್ಲಿದ್ದ ಆನಂದ ಪೂಜಾರಿ ಅವರ ಸಹೋದರ ಜಯಾನಂದ ಹಾಗೂ ಇತರರು ಬಾಲಕನನ್ನು ಮೂಡುಬಿದಿರೆಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಜಯಾನಂದ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Post a Comment

0 Comments

ಜಾಹೀರಾತು

Responsive Advertisement