Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕೇಂದ್ರ ಸರ್ಕಾರದಿಂದ ಕ್ಯಾನ್ಸರ್ ನಿರೋಧಕ ಜೀವ ರಕ್ಷಕ ಔಷಧಿಗಳ ಬೆಲೆ ಇಳಿಕೆಗೆ ಚಿಂತನೆ


ನವದೆಹಲಿ : ಕೇಂದ್ರ ಸರ್ಕಾರವು ಕ್ಯಾನ್ಸರ್ ನಿರೋಧಕ ಜೀವ ರಕ್ಷಕ ಔಷಧಗಳ ಬೆಲೆಯನ್ನು ತಗ್ಗಿಸಲು ಚಿಂತನೆ ನಡೆಸುತ್ತಿದ್ದು, ದೇಶದಲ್ಲಿ ಕ್ಯಾನ್ಸರ್ ಔಷಧಿಗಳ ಚಿಲ್ಲರೆ ಬೆಲೆಯಲ್ಲಿ ಶೇ. 70ರಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರವು ಬೆಲೆ ನಿಯಂತ್ರಣಕ್ಕೆ ಒಳಪಡದ ಕ್ಯಾನ್ಸರ್ ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ವ್ಯಾಪಾರ ಲಾಭಾಂಶದ ಮಿತಿಯನ್ನು ಶೇ. 30ಕ್ಕೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಸಿದ್ಧಪಡಿಸಿದೆ. ಈ ಮೂಲಕ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಗೆ ಔಷಧಿಗಳ ಲಭ್ಯತೆಯನ್ನು ಕಾಯ್ದುಕೊಳ್ಳುವುದರ ಮೇಲೆ ಮತ್ತು ರೋಗಿಗಳಿಗೆ ಅವುಗಳನ್ನು ಹೆಚ್ಚು ಕೈಗೆಟುಕುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ.

ಈ ಹೊಸ ಮಿತಿಯು ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ವಿದೇಶದಿಂದ ಆಮದು ಮಾಡಿಕೊಳ್ಳಲಾಗುವ ಎಲ್ಲಾ ರೀತಿಯ ಕ್ಯಾನ್ಸರ್ ನಿರೋಧಕ ಔಷಧಗಳಿಗೂ ಅನ್ವಯವಾಗಲಿದೆ. ಸರ್ಕಾರದ ಈ ನಿರ್ಧಾರ ಜಾರಿಗೆ ಬಂದರೆ, ದೇಶದ ಲಕ್ಷಾಂತರ ಕ್ಯಾನ್ಸರ್ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ಒಟ್ಟಾರೆಯಾಗಿ ವಾರ್ಷಿಕ ಸುಮಾರು 2,500 ಕೋಟಿ ರೂ.ಗಳಷ್ಟು ಹಣ ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

ಖಾಸಗಿ ಆಸ್ಪತ್ರೆಗಳು ಮತ್ತು ಮಾರಾಟಗಾರರು ತಯಾರಿಕಾ ವೆಚ್ಚಕ್ಕಿಂತ ಹತ್ತಾರು ಪಟ್ಟು ಹೆಚ್ಚಿನ ದರದಲ್ಲಿ ಎಂಆರ್‌ಪಿ ನಿಗದಿಪಡಿಸಿ ಮಾರಾಟ ಮಾಡುತ್ತಿರುವುದನ್ನು ತಡೆಯಲು ಮತ್ತು ಜೀವರಕ್ಷಕ ಔಷಧಗಳನ್ನು ಕೈಗೆಟಕುವ ದರದಲ್ಲಿ ಸಾಮಾನ್ಯ ಜನರಿಗೆ ತಲುಪಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ಕ್ಯಾನ್ಸರ್ ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಂಡ ವಿಭಾಗೀಯ ಸಮಿತಿ ಒಪ್ಪಿಗೆ ನೀಡಿದ ಬಳಿಕ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆಯಿದೆ.

Post a Comment

0 Comments

ಜಾಹೀರಾತು

Responsive Advertisement