Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ರೈಲುಗಳಲ್ಲಿ ರಾತ್ರಿ ಮೊಬೈಲ್ ಚಾರ್ಜಿಂಗ್‌ಗೆ ನಿಯಂತ್ರಣ : ರಾತ್ರಿ 11ರಿಂದ ಬೆಳಗಿನ 5ರವರೆಗೆ ವಿದ್ಯುತ್ ಕಡಿತಕ್ಕೆ ರೈಲ್ವೆ ಸೂಚನೆ

ತಿರುವನಂತಪುರ : ರೈಲುಗಳಲ್ಲಿ ರಾತ್ರಿ ವೇಳೆ ಮೊಬೈಲ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಚಾರ್ಜ್ ಮಾಡುವುದಕ್ಕೆ ರೈಲ್ವೆ ಇಲಾಖೆ ಕಟ್ಟುನಿಟ್ಟಿನ ನಿಯಂತ್ರಣ ವಿಧಿಸಿದೆ. ರಾತ್ರಿ 11ರಿಂದ ಬೆಳಗಿನ 5ರವರೆಗೆ ರೈಲು ಬೋಗಿಗಳಲ್ಲಿನ ಚಾರ್ಜಿಂಗ್ ಪಾಯಿಂಟ್‌ಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸುವಂತೆ ಎಲ್ಲ ರೈಲ್ವೆ ವಲಯಗಳಿಗೂ ಸೂಚನೆ ನೀಡಲಾಗಿದೆ.

ಚಾರ್ಜಿಂಗ್ ಪಾಯಿಂಟ್‌ಗಳು ನಿಗದಿತ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ದಿಢೀರ್ ತಪಾಸಣೆ ನಡೆಸುವಂತೆಯೂ ಸೂಚಿಸಲಾಗಿದೆ. ನಿಯಮವನ್ನು ಪಾಲಿಸದ ರೈಲುಗಳ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

2014ರಲ್ಲಿ ರೈಲ್ವೆ ಮಂಡಳಿ ಜಾರಿಗೆ ತಂದಿದ್ದ ನಿಯಮವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಇದೀಗ ಎಲ್ಲ ವಲಯಗಳಿಗೆ ಪತ್ರ ಬರೆಯಲಾಗಿದೆ. ಇತ್ತೀಚೆಗೆ ಮುಂಬೈ - ಹೌರಾ ಮೇಲ್ ರೈಲಿನಲ್ಲಿ ಸಂಭವಿಸಿದ ಅಪಘಾತದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಒಡಿಶಾ ಮೂಲಕ ಸಂಚರಿಸುತ್ತಿದ್ದ ರೈಲಿನ ಎಸಿ ಬೋಗಿಯಲ್ಲಿ ಪವರ್‌ಬ್ಯಾಂಕ್ ಸ್ಫೋಟಗೊಂಡು ಘಟನೆ ಸಂಭವಿಸಿತ್ತು. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದಿದ್ದರೂ, ಕರ್ತವ್ಯ ನಿರ್ವಹಣೆಯಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯವಿತ್ತೇ ಎಂಬ ಬಗ್ಗೆ ರೈಲ್ವೆ ಇಲಾಖೆ ಪರಿಶೀಲನೆ ನಡೆಸಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ವೇಳೆ ಚಾರ್ಜಿಂಗ್ ಪಾಯಿಂಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಲಾಗಿದೆ.

Post a Comment

0 Comments

ಜಾಹೀರಾತು

Responsive Advertisement