Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಯ್ಯಾರ್‌ನಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ವಶಕ್ಕೆ; ಇಬ್ಬರ ಬಂಧನ

ಕುಂಬಳೆ : ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಶಿರಿಯ ನಿವಾಸಿ ರಜಿನ್ ಕುಮಾರ್ (26) ಹಾಗೂ ಇಚ್ಲಂಗೋಡು ವೀರನಗರ ನಿವಾಸಿ ಮುಖೇಶ್ (27) ಎಂದು ಗುರುತಿಸಲಾಗಿದೆ.

ನಿನ್ನೆ ಮಧ್ಯಾಹ್ನ ಕುಂಬಳೆ ಎಸ್‌ಐ ವಿ.ವಿ. ಸಂತೋಷ್ ಅವರ ನೇತೃತ್ವದಲ್ಲಿ ಕಯ್ಯಾರ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಂಡೆಕಾಪು ಕಡೆಯಿಂದ ಪೆರ್ಮುದೆ ಭಾಗಕ್ಕೆ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಮರಳು ಸಾಗಾಟಕ್ಕೆ ಅಗತ್ಯ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನದಿ ಮರಳು ಕಳ್ಳತನಕ್ಕೆ ಸಂಬಂಧಿಸಿದಂತೆ ಟಿಪ್ಪರ್ ಲಾರಿ ಮಾಲೀಕರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement