Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಂಬಳೆಯಲ್ಲಿ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಅಂಗನವಾಡಿ ಉತ್ಸವ

ಕುಂಬಳೆ : ಬಿಜೆಪಿ  ಮಂಡಲದ ವತಿಯಿಂದ ನಡೆದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಅಂಗನವಾಡಿ ಉತ್ಸವ ಕಾರ್ಯಕ್ರಮವು  ಕುಂಬಳೆ ಸರ್ವೀಸ್ ಕೋ-ಆಪರೇಟಿವ್ ಬ್ಯಾಂಕ್ ಹಾಲ್‌ನಲ್ಲಿ  ನಡೆಯಿತು.

ಕಾರ್ಯಕ್ರಮದಲ್ಲಿ ಸುಮಾರು 152 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಭಾರತೀಯ ಜನತಾ ಪಕ್ಷದ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಉದ್ಘಾಟಿಸಿದರು.

ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷ ವಿಕ್ರಮ್ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಜನರಲ್ ಸೆಕ್ರೆಟರಿ ಪಿ.ಆರ್. ಸುನಿಲ್, ರಾಜ್ಯ ಸಮಿತಿ ಸದಸ್ಯರಾದ ವಿ ರವೀಂದ್ರನ್, ಸತೀಶ್ಚಂದ್ರ ಭಂಡಾರಿ, ವಲಯ ಸಮಿತಿ ಉಪಾಧ್ಯಕ್ಷ ವಿಜಯ್ ಕುಮಾರ್ ರೈ , ಮಂಡಲ ಪ್ರಭಾರಿ ಪಿ. ರಮೇಶ್, ಜಿಲ್ಲಾ ಉಪಾಧ್ಯಕ್ಷ ಮುರಳೀಧರ ಯಾದವ್, ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಪಿ. ವಲ್ಸರಾಜ್, ಸುಕುಮಾರ್ ಕುದ್ರೆಪ್ಪಾಡಿ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ಎಸ್. ಗಟ್ಟಿ, ಜಿಲ್ಲಾ ಸಮಿತಿ ಸದಸ್ಯರಾದ ಬಾಬು ಕುಬಣೂರು, ರಮೇಶ್ ಭಟ್, ಸ್ಟೇಟ್ ಕೌನ್ಸಿಲ್ ಸದಸ್ಯರಾದ ಜಯಂತ ಪಾಟಾಳಿ, ಕುಂಬಳೆ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಧಾ ಗಣೇಶ್ ಹಾಗೂ ಕುಂಬಳೆ ಪಂಚಾಯತ್ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾರದ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ಮಂಗಲ್ಪಾಡಿ ಪಂಚಾಯತ್ ಸದಸ್ಯೆ ಸಾಕ್ಷಿ ಶೆಟ್ಟಿ, ಮಂಡಲ ಉಪಾಧ್ಯಕ್ಷೆ ಪ್ರೇಮಾವತಿ ಹಾಗೂ ಮಂಡಲ ಸಮಿತಿ ಸದಸ್ಯೆ  ಶೋಭಾ  ನೇತೃತ್ವ ವಹಿಸಿದ್ದರು.

ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಅಂಗನವಾಡಿಗಳ ಮಹತ್ವ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅಂಗನವಾಡಿ ವ್ಯವಸ್ಥೆಯ ಮೂಲಕ ಸಮಾಜಕ್ಕೆ ದೊರೆಯುತ್ತಿರುವ ಸೇವೆಗಳ ಕುರಿತು ವಿ.ರವೀಂದ್ರನ್ ಅವರು ವಿವರವಾಗಿ ಮಾಹಿತಿ ನೀಡಿದರು. ಮಂಡಲ ಜನರಲ್ ಸೆಕ್ರೆಟರಿ ಮಹೇಶ್ ಪುಣಿಯೂರು, ದಿನೇಶ್ ಮುಳಿಂಜ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಪ್ರೇಮಾವತಿ ಅವರು 'ವಂದೇ ಮಾತರಂ' ಗೀತೆಯನ್ನು ಸಂಪೂರ್ಣವಾಗಿ ಹಾಡಿದರು. ನಂತರ  ಅಂಗನವಾಡಿ ಕಾರ್ಯಕರ್ತೆಯರನ್ನು ಮತ್ತು ಸಹಾಯಕಿಯರನ್ನು, ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.

ಸೇವಾ ಸಂಕಲ್ಪ ಅಭಿಯಾನದ ಆಶಯದಂತೆ ಸಮಾಜದ ವಿವಿಧ ವರ್ಗಗಳೊಂದಿಗೆ ಸಂಪರ್ಕ ಬೆಳೆಸಿ, ಸೇವೆಯ ಮಹತ್ವವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ನಡೆದ ಈ ಅಂಗನವಾಡಿ ಉತ್ಸವ ಅತ್ಯಂತ ಯಶಸ್ವಿಯಾಗಿ ನೆರವೇರಿತು.

Post a Comment

0 Comments

ಜಾಹೀರಾತು

Responsive Advertisement