Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕುಂಬಳೆ ರೈಲ್ವೆ ಸ್ಟೇಶನ್ ಬಳಿ ಕಾರಿನೊಳಗೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಯುವಕನ ವಿರುದ್ಧ ಪೋಕ್ಸೋ ಕೇಸು

ಕಾಸರಗೋಡು : ಕುಂಬಳೆ ರೈಲು ನಿಲ್ದಾಣದ ಸಮೀಪದ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಕಾಸರಗೋಡು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಅಹ್ಮದ್ ಅಫ್ಸಲ್ ಎಂಬಾತನ ವಿರುದ್ಧ ಬಾಲಕಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಕಾಸರಗೋಡು ಪೊಲೀಸ್ ಉಪವಿಭಾಗ ವ್ಯಾಪ್ತಿಯ ನಿವಾಸಿಯಾಗಿರುವ ಬಾಲಕಿ ಪ್ಲಸ್‌ ಒನ್ ವಿದ್ಯಾರ್ಥಿನಿಯಾಗಿದ್ದಾಳೆ.

ತೀವ್ರ ಹೊಟ್ಟೆನೋವಿನಿಂದ ಚಿಕಿತ್ಸೆಗಾಗಿ ವೈದ್ಯರನ್ನು ಭೇಟಿಯಾದಾಗ ಘಟನೆ ಬೆಳಕಿಗೆ ಬಂದಿದೆ. ಬಾಲಕಿಯಿಂದ ಮಾಹಿತಿ ಪಡೆದ ವೈದ್ಯರು ಪೊಲೀಸರಿಗೆ ವಿಷಯ ತಿಳಿಸಿದ್ದು, ಬಳಿಕ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಇನ್‌ಸ್ಟಾಗ್ರಾಂ ಮೂಲಕ ಆರೋಪಿ ಬಾಲಕಿಗೆ ಪರಿಚಯವಾಗಿದ್ದಾನೆ. ಬಳಿಕ ಒಂದು ದಿನ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಕುಂಬಳೆ ರೈಲು ನಿಲ್ದಾಣದ ಸಮೀಪದ ಜನವಸತಿ ಇಲ್ಲದ ಪ್ರದೇಶದಲ್ಲಿ ದೌರ್ಜನ್ಯ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆ ಬಗ್ಗೆ ಭಯಗೊಂಡಿದ್ದ ಬಾಲಕಿ ಈ ವಿಚಾರವನ್ನು ಯಾರೊಂದಿಗೂ ಹೇಳಿರಲಿಲ್ಲ ಎನ್ನಲಾಗಿದೆ. ವೈದ್ಯಕೀಯ ಪರಿಶೋಧನೆ  ವೇಳೆ ವಿಷಯ ಬೆಳಕಿಗೆ ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕುಂಬಳೆ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು ತನಿಖೆ ನಿರತರಾಗಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement