Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮಾಣಿಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ

ಮಾಣಿಲ : ಪಾರಾದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಪಣಂಬೂರು, ಮಂಗಳೂರು ಇವರ ವತಿಯಿಂದ ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಹಾಗೂ ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.

ಅ.04ರಂದು ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವಿನಲ್ಲಿ ನಡೆದ ಶಿಬಿರವನ್ನು ಶಾಲಾ ಸಂಚಾಲಕ ನಡುಮನೆ ಮಹಾಬಲ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಾರಾದೀಪ್ ಫಾಸ್ಪೇಟ್ಸ್ ಲಿಮಿಟೆಡ್ ಸಂಸ್ಥೆಯ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿ, ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ನೇತ್ರ ತಪಾಸಣಾ ಶಿಬಿರ ಆಯೋಜಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆಯ ಕಣ್ಣಿನ ವಿಭಾಗದ ಮುಖ್ಯಸ್ಥ ರಿಷಿಕೇಶ್ ಅಮೀನ್, ಪಾರಾದೀಪ್ ಫಾಸ್ಪೇಟ್ಸ್ ಲಿಮಿಟೆಡ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಚೇತನ್ ಮೆಂಡೋನ್ಜಾ ಹಾಗೂ ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುರುವಿನ ಮುಖ್ಯೋಪಾಧ್ಯಾಯ ದಯಾನಂದ ನಾಯಕ್ ಉಪಸ್ಥಿತರಿದ್ದರು.

ಪಾರಾದೀಪ್ ಫಾಸ್ಪೇಟ್ಸ್ ಲಿಮಿಟೆಡ್‌ನ ವೈದ್ಯಾಧಿಕಾರಿ ಡಾ. ಯೋಗೀಶ್ ಭಟ್ ಅವರು ಶಿಬಿರದ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ರಂಜಿತ್ ಕುಮಾರ್ ಕೆ. ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments

ಜಾಹೀರಾತು

Responsive Advertisement