Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾರಿನೊಳಗೆ ಎಂಬಿಬಿಎಸ್ ವಿದ್ಯಾರ್ಥಿಯ ಮೃತದೇಹ ಪತ್ತೆ

ತಿರುವನಂತಪುರ : ಕಾರಿನೊಳಗೆ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆಲಪ್ಪುಳ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಹಾಗೂ ಕಿಳಿಮಾನೂರು ತಟ್ಟತ್ ಮಲ ನಿವಾಸಿ ಆಶಿಕ್ (23) ಮೃತಪಟ್ಟ ವಿದ್ಯಾರ್ಥಿ.

ನಿನ್ನೆ ಸಂಜೆ ಸುಮಾರು 4 ಗಂಟೆಗೆ ಆಶಿಕ್ ಮನೆಯಿಂದ ಕಾರಿನಲ್ಲಿ ಹೊರಗೆ ತೆರಳಿದ್ದರು. ಆದರೆ ರಾತ್ರಿ ಕಳೆದರೂ ಮನೆಗೆ ಮರಳದ ಹಿನ್ನೆಲೆಯಲ್ಲಿ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದರು. ದೂರಿನ ಆಧಾರದ ಮೇಲೆ ಪೊಲೀಸರು ನಡೆಸಿದ ಹುಡುಕಾಟದಲ್ಲಿ ಕಲ್ಲಂಬಲಂ ರಾಷ್ಟ್ರೀಯ ಹೆದ್ದಾರಿ ಸಮೀಪದ ಒಳರಸ್ತೆಯೊಂದರಲ್ಲಿ ಆಶಿಕ್ ಅವರ ಕಾರು ಪತ್ತೆಯಾಯಿತು.

ಕಾರಿನೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಆಶಿಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement