Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ

ಕಡಬ : ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

2021ರ ಮೇ 8ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬದ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯಡಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಕಲಂ 506ರ ಅಡಿಯಲ್ಲಿ ಜೀವ ಬೆದರಿಕೆ ಒಡ್ಡಿದ ಅಪರಾಧಕ್ಕಾಗಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.

ಹೀಗೆ ಒಟ್ಟು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Post a Comment

0 Comments

ಜಾಹೀರಾತು

Responsive Advertisement