Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸೀತಾಂಗೋಳಿ-ಪೆರ್ಲ ರಸ್ತೆಯ ಮುಗುರೋಡಿನಲ್ಲಿ ಬೈಕು-ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಕುಂಬಳೆ : ಸೀತಾಂಗೋಳಿ-ಪೆರ್ಲ ರಸ್ತೆಯ ಮುಖಾರಿಕಂಡ ಸಮೀಪದ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಬೈಕು ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಊಜಂಪದವು ನಿವಾಸಿ ಮೊಹಮ್ಮದ್ ಅವರ ಪುತ್ರ ಎಂ.ಟಿ. ಮೊಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.

ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಗೆ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಶ್ರಫ್ ತನ್ನ ಪತ್ನಿ ಮಗುವಿನ ಸಹಿತ ತೆರಳುತ್ತಿದ್ದು ಅವರ ಪತ್ನಿಗೂ ಅಪಘಾತದಲ್ಲಿ ಗಂಭೀರ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

Post a Comment

0 Comments

ಜಾಹೀರಾತು

Responsive Advertisement