ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ ಸ್ಲೀಪರ್ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಬಸ್ ಚಾಲಕ ಸುನೀಲ್, ಕ್ಲೀನರ್ ಸದೇಶ್ ಹಾಗೂ ಕೇರಳದ ಅಫ್ತಾಬ್ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಾಯಗೊಂಡವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ನಲ್ಲಿ 36 ಮಂದಿ ಪ್ರಯಾಣಿಸುತ್ತಿದ್ದು, ಅವರೆಲ್ಲರೂ ಕೇರಳದವರು ಎಂದು ತಿಳಿದುಬಂದಿದೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.


0 Comments