Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಉಪ್ಪಿನಂಗಡಿಯಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ : ಇಬ್ಬರ ಬಂಧನ; ಇನೋರ್ವ ಆರೋಪಿ ಪರಾರಿ

ಮಂಗಳೂರು : ಉಪ್ಪಿನಂಗಡಿಯ ಕಾರ್ತಿಕ್ ಬಾರ್ ಹೊರಭಾಗದಲ್ಲಿ ಅಕ್ಟೋಬರ್ 18ರ ರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ತಲ್ವಾರ್ ಹಾಗೂ ಬಿಯರ್ ಬಾಟಲಿ ಹಿಡಿದು ಗಲಾಟೆ ನಡೆಸಿದ ಘಟನೆ ಆತಂಕಕ್ಕೆ ಕಾರಣವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಳಂತಿಲ ನಿವಾಸಿ ಮಂಜುನಾಥ್ ಹಾಗೂ ಕರವಲು ನಿವಾಸಿ ವಿಶ್ವನಾಥ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರವಲಿನ ಮತ್ತೊಬ್ಬ ಆರೋಪಿ ಮುನ್ನಾ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಮದ್ಯದ ಅಮಲಿನಲ್ಲಿದ್ದ ಗುಂಪು ಬಾರ್ ಹೊರಗಿನ ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ನಡೆಸಿ ಜನರಲ್ಲಿ ಭೀತಿ ಮೂಡಿಸಿತ್ತು. ಈ ವೇಳೆ ಮಂಜುನಾಥ್ ತಲ್ವಾರ್ ಬೀಸುತ್ತಿದ್ದರೆ, ಮುನ್ನಾ ಬಿಯರ್ ಬಾಟಲಿ ಹಿಡಿದುಕೊಂಡಿದ್ದ ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್‌ನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ತಲ್ವಾರ್ ಅನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರನ್ನು ಕಂಡ ಮುನ್ನಾ ಸ್ಥಳದಿಂದ ಪರಾರಿಯಾಗಿದ್ದಾನೆ.

ವಿಚಾರಣೆ ವೇಳೆ, ಮದ್ಯದ ಅಮಲಿನಲ್ಲಿದ್ದ ಮುನ್ನಾ ಮಂಜುನಾಥ್‌ನ ಮನೆಯವರನ್ನು ಅವಾಚ್ಯವಾಗಿ ನಿಂದಿಸಿದ್ದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಗಲಾಟೆ ಸಂಭವಿಸಿದೆ ಎಂಬ ಮಾಹಿತಿ ಲಭಿಸಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments

ಜಾಹೀರಾತು

Responsive Advertisement