Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಅಫ್ಘಾನಿಸ್ತಾನದಲ್ಲಿ ಶಾಲೆಯ ಬಳಿ ಭೀಕರ ಸ್ಫೋಟ: ಏಳು ವಿದ್ಯಾರ್ಥಿಗಳು ಸಾವು; 100ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಬೂಲ್: ಅಫ್ಘಾನಿಸ್ತಾನದ ಕುನಾರ್ ಪ್ರಾಂತ್ಯದಲ್ಲಿ ಶಾಲೆಯೊಂದರ ಸಮೀಪ ಸಂಭವಿಸಿದ ಭೀಕರ ಸ್ಫೋಟದಲ್ಲಿ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಸುಮಾರು  100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಶಾಲೆಯ ಪಕ್ಕದಲ್ಲಿದ್ದ ಮನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಣಿಗಾರಿಕೆ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಈ ಮನೆಯಲ್ಲಿ ಡೈನಮೈಟ್ ಸಂಗ್ರಹಿಸಿಟ್ಟಿದ್ದರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಈ ಕುರಿತು ಮಾಹಿತಿ ನೀಡಿರುವ ಮಾಹಿತಿ ಮತ್ತು ಸಂಸ್ಕೃತಿ ನಿರ್ದೇಶಕ ಮಾವ್ಲಾವಿ ಸಮಿ-ಉಲ್-ಹಕ್, ಮಧ್ಯಮ ಶಾಲೆಯ ಸಮೀಪವಿರುವ ಕಾರ್ಮಿಕರ ಮನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಆದರೆ ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತನಿಖಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ಮುಂದುವರಿದಿದೆ. ಪೂರ್ವ ಅಫ್ಘಾನಿಸ್ತಾನದಲ್ಲಿರುವ ಕುನಾರ್ ಪ್ರಾಂತ್ಯವು ಪಾಕಿಸ್ತಾನದ ಗಡಿಯನ್ನು ಹಂಚಿಕೊಂಡಿದೆ. ಗಾಯಾಳುಗಳ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ.

Post a Comment

0 Comments

ಜಾಹೀರಾತು

Responsive Advertisement