Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಸುಳ್ಯದ ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳ ಕಳವಿಗೆತ್ನ: ಇಬ್ಬರ ಬಂಧನ

ಸುಳ್ಯ :  ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ (ಬುಧವಾರ) ಬೆಳಗ್ಗಿನ ಜಾವ ಜಾನುವಾರು ಕಳ್ಳತನಕ್ಕೆ ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್.ಎ (28) ಮತ್ತು ಸಂಶುದ್ದೀನ್.ಎಸ್.ಎಂ. (25) ಎಂದು ತಿಳಿದುಬಂದಿದೆ. ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಕಳ್ಳತನ ಮಾಡಲು ಪ್ರಯತ್ನಿಸುತ್ತಿದ್ದುದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸ್ಥಳಕ್ಕೆ ಬಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Post a Comment

0 Comments

ಜಾಹೀರಾತು

Responsive Advertisement