ಇದೇ ದಿನ ಜಿಲ್ಲೆಯ ವಿವಿದೆಡೆಗಳಲ್ಲಿ ಮುಖ್ಯಮಂತ್ರಿ ವಿ.ಡಿ. ಸತೀಶನ್, ಸ್ಥಳೀಯ ಸ್ವಯಂ ಆಡಳಿತ ಸಚಿವ ಕೆ.ಎಂ. ಶಾಜಿ ಹಾಗೂ ಸಹಕಾರ ಮತ್ತು ಅಬಕಾರಿ ಇಲಾಖೆ ಸಚಿವ ಎಂ. ಲಿಜು ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಚೆಟ್ಟುಂಕುಝಿ ರಾಯಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕಾಸರಗೋಡು ಅತಿಥಿಗೃಹದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಕಾಞಂಗಾಡ್ ಟೌನ್ ಹಾಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 3.45ಕ್ಕೆ ಅಜಾನೂರು ಬಂದರಿಗೆ ಭೇಟಿ ನೀಡಿದ ಬಳಿಕ 4.30ಕ್ಕೆ ತೃಕ್ಕರಿಪುರದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಕಣ್ಣೂರಿಗೆ ತೆರಳಲಿದ್ದಾರೆ.
ಸಚಿವ ಕೆ.ಎಂ. ಶಾಜಿ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿ ಸಮೀಪ ಜಿಲ್ಲಾ ಪಂಚಾಯತ್ ವತಿಯಿಂದ ಸ್ಥಾಪಿಸಲಾದ ವಿದ್ಯುತ್ ವಾಹನಗಳ (EV) ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಲಿದ್ದಾರೆ. 10.30ಕ್ಕೆ ಚೆಟ್ಟುಕುಝಿ ರಾಯಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 11 ಗಂಟೆಗೆ ಕಾಞಂಗಾಡ್ ಪಲಾಡಿಯಂ ಕನ್ವೆನ್ಷನ್ ಸೆಂಟರ್‌ನಲ್ಲಿ ಸಹಕಾರ ಸಪ್ತಾಹದ ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ಸಂಜೆ 3 ಗಂಟೆಗೆ ಕಾಞಂಗಾಡ್ ಟೌನ್ ಹಾಲ್ ಹಾಗೂ 4.30ಕ್ಕೆ ತೃಕ್ಕರಿಪುರದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸಚಿವ ಎಂ. ಲಿಜು ಬೆಳಿಗ್ಗೆ 10 ಗಂಟೆಗೆ ಹೊಸದುರ್ಗ ಸರ್ವೀಸ್ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10.30ಕ್ಕೆ ಕಾಞಂಗಾಡ್ ಪಲಾಡಿಯಂ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುವ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನೀಲೇಶ್ವರ ತಾಲೂಕು ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಉದ್ಘಾಟಿಸಲಿದ್ದಾರೆ.

0 Comments