Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಾರಿನಲ್ಲಿ ಸಾಗಿಸುತ್ತಿದ್ದ 210 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳ ಸಹಿತ ಯುವಕನ ಬಂಧನ

ಕಾಸರಗೋಡು: ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಕಾರಿನಲ್ಲಿ ಸಾಗಿಸುತ್ತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳೊಂದಿಗೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಧೂರು ಹಿದಾಯತ್ ನಗರದ ಚೆಟ್ಟುಂಗುಳಿಯ ರಾಶಿದ್ ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ಚೌಕಿ ಕುನ್ನಿಲ್‌ನಲ್ಲಿ ಎಸ್‌ಐ ವಿ.ವಿ. ಸುರೇಶ್ ನೇತೃತ್ವದ ಪೊಲೀಸ್ ತಂಡ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ. ಚೌಕಿಯಿಂದ ಕಂಬಾರ್ ಕಡೆಗೆ ತೆರಳುತ್ತಿದ್ದ ಕಾರು ಪೊಲೀಸರನ್ನು ಕಂಡ ತಕ್ಷಣ ಹಿಂದಕ್ಕೆ ತಿರುಗಿದೆ. ಇದರಿಂದ ಅನುಮಾನಗೊಂಡ ಪೊಲೀಸರು ಕಾರನ್ನು ಬೆನ್ನಟ್ಟಿ ತಡೆದು ಪರಿಶೀಲನೆ ನಡೆಸಿದರು.

ಕಾರಿನ ಡಿಕ್ಕಿಯಲ್ಲಿ ಚೀಲದಲ್ಲಿ ಸಂಗ್ರಹಿಸಿಟ್ಟಿದ್ದ 210 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳು ಪತ್ತೆಯಾಗಿವೆ. ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಇತರರಿಗೆ ಮಾರಾಟ ಮಾಡಲು ಇವುಗಳನ್ನು ಸಾಗಿಸುತ್ತಿದ್ದುದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.

ಕಾರನ್ನು ಹಾಗೂ ತಂಬಾಕು ಉತ್ಪನ್ನಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಕೆ.ವಿ. ರಜೀಶ್ ಮತ್ತು ಬಿನು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Post a Comment

0 Comments

ಜಾಹೀರಾತು

Responsive Advertisement