ಕಾಸರಗೋಡು: ಅಡ್ಕತ್ತಬೈಲಿನಲ್ಲಿ ನಿಲ್ಲಿಸಿದ್ದ ಸ್ಕೂಟರ್‌ವೊಂದು ನಿಗೂಢ ರೀತಿಯಲ್ಲಿ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ತಾಳಿಪಡ್ಪಿನ ಶೋಭ್ ರಾಜ್ ಎಂಬುವವರಿಗೆ ಸೇರಿದ ಸ್ಕೂಟರ್ ಇದಾಗಿದೆ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಶೋಭ್ ರಾಜ್ ಅವರು ತೋಟತಡ್ಕ ಸಮೀಪದ ಜನವಸತಿ ಇಲ್ಲದ ಮನೆಯೊಂದರ ಬಳಿ ಶುಕ್ರವಾರ ಬೆಳಗ್ಗೆ ಸ್ಕೂಟರ್ ನಿಲ್ಲಿಸಿದ್ದರು. ಮಧ್ಯಾಹ್ನದ ವೇಳೆಗೆ ಸ್ಕೂಟರ್ ಬೆಂಕಿಯಿಂದ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶೋಭ್ ರಾಜ್ ಅವರು ಶಬರಿಮಲೆ ಯಾತ್ರೆ ಕೈಗೊಳ್ಳುವ ಉದ್ದೇಶದಿಂದ ಮಾಲೆ ಧರಿಸಿದ್ದರು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೊರೆನ್ಸಿಕ್ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಕೂಟರ್ ಬೆಂಕಿಗಾಹುತಿಯಾಗಲು ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

0 Comments