Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಲೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ದಾರಿ: ಶಾಸಕ ಕೆ. ನೀಲಕಂಠನ್

ಬದಿಯಡ್ಕ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲ ಪ್ರತಿಭೆಗಳನ್ನು ಹೊರಹಾಕಲು ಶಾಲಾ ಕಲೋತ್ಸವಗಳು ಅತ್ಯುತ್ತಮ ವೇದಿಕೆಯಾಗಿದ್ದು, ಕೇವಲ ಅಂಕಗಳಿಕೆಯ ಶಿಕ್ಷಣದೊಂದಿಗೆ ಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಯ ಸರ್ವಾಂಗೀಣ ವಿಕಾಸಕ್ಕೆ ಅತ್ಯಾವಶ್ಯಕ ಎಂದು ಉದುಮ ಕ್ಷೇತ್ರದ ಶಾಸಕ ಕೆ. ನೀಲಕಂಠನ್ ಅಭಿಪ್ರಾಯಪಟ್ಟಿದ್ದಾರೆ. 

ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗುತ್ತಿರುವ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವವನ್ನು ದೀಪಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.  ಕಾಸರಗೋಡು ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಮತ್ತು ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವಲ್ಲಿ ಯುವ ಪೀಳಿಗೆಯ ಪಾತ್ರ ಹಿರಿದಾದದ್ದು ಎಂದು ಅವರು ಬಣ್ಣಿಸಿದರು. ಸ್ಪರ್ಧೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಬದಲಾಗಿ ಕಲೋತ್ಸವದ ಮೂಲಕ ಪರಸ್ಪರ ಸೌಹಾರ್ದತೆ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಂಘಟಕ ಸಮಿತಿ ಅಧ್ಯಕ್ಷ, ಬದಿಯಡ್ಕ ಗ್ರಾಮಪಂಚಾಯಿತಿ ಅಧ್ಯಕ್ಷ ಶಂಕರ ಡಿ. ಸ್ವಾಗತಿಸಿದರು. ಶಾಲಾ ಪ್ರಾಂಶುಪಾಲ ಶ್ರೀಕೃಷ್ಣ ಎಂ. ಪ್ರಾಸ್ತಾವಿಕ ಮಾತುಗಳನ್ನಾಡಿದರು. 

ಕಾಸರಗೋಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಾಬು ಅಬ್ರಹಾಂ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಬ್ಲೋಕ್ ಪಂಚಾಯಿತಿ ಅಧ್ಯಕ್ಷ ಅಬ್ದುಲ್ಲ ಕುಂಞಿ ಚೆರ್ಕಳ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಪುತ್ತಿಗೆ ಗ್ರಾಮಪಂಚಾಯಿತಿ ಅಧ್ಯಕ್ಷೆ ಫಿದಾ ಊಜಂಪದವು, ಬದಿಯಡ್ಕ ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ., ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ ಜೆ.ಎಸ್., ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ, ಬದಿಯಡ್ಕ ಗ್ರಾಮಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ, ಬ್ಲೋಕ್ ಪಂಚಾಯಿತಿ ಸದಸ್ಯ ಖಾದರ್ ಮಾನ್ಯ, ಸಂಘಟಕ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮಪ್ರಸಾದ ಮಾನ್ಯ, ಬದಿಯಡ್ಕ ಗ್ರಾಮಪಂಚಾಯಿತಿ ಸದಸ್ಯರುಗಳಾದ ಲೀಲಾವತಿ, ಉಷಾ ಪಳ್ಳತ್ತಡ್ಕ, ಫಾತಿಮತ್ ಫೌಸಿಯಾ, ಮಧುಸೂದನ ಕಂಗಿಲ, ಶಾಹಿನಾ ಅನ್ವರ್, ಸುಬೈದ, ಪ್ರಜ್ಞಾ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಅಶೋಕ ಎಂ., ಮುಖ್ಯೋಪಾಧ್ಯಾಯಿನಿ ಶಾಹಿದಾ ಬೀವಿ ಟಿ.ಎಚ್., ವ್ಯವಸ್ಥಾಪಕ ಮಂಡಳಿ ಉಪಾಧ್ಯಕ್ಷ ರಮೇಶ್ ಕುಂಡ್ಯಪ್ಪಾಡಿ, ವ್ಯವಸ್ಥಾಪಕರ ಸಂಘಟನೆಯ ಕುಂಬಳೆ ಉಪಜಿಲ್ಲಾ ಅಧ್ಯಕ್ಷ ಜಯದೇವ ಖಂಡಿಗೆ, ಸಂಘಟಕ ಸಮಿತಿ ಅಧ್ಯಕ್ಷ ಆನಂದ ಕೆ.ಮವ್ವಾರು, ರಾಷ್ಟ್ರಪ್ರಶಸ್ತಿ ವಿಜೇತ ಅಧ್ಯಾಪಕ ಶಂಕರ್ ಸಾರಡ್ಕ, ಎಚ್‌ಎಮ್ ಫೋರಮ್ ಸಂಚಾಲಕ ಸುರೇಂದ್ರ ಮಾನ್ಯ, ಎಸ್.ಎಂ.ಸಿ.ಚೇರ್‌ಮೇನ್ ಶರೀಫ್ ಪಾಲೆಕ್ಕಾರು, ವಿವಿಧ ಪಕ್ಷಗಳ ಪ್ರತಿನಿಧಿಗಳಾದ ಪಿ.ಜಿ.ಚಂದ್ರಹಾಸ ರೈ, ಅನ್ವರ್ ಓಸೋನ್, ಶ್ರೀಕಾಂತ್ ಕಾಡಮನೆ, ಉದ್ಯಮಿ ನಿತ್ಯಾನಂದ ಶೆಣೈ ಬದಿಯಡ್ಕ, ಟ್ರೋಫಿ ಸಮಿತಿ ಕಾರ್ಯದರ್ಶಿ ಇ.ರಾಮಕೃಷ್ಣನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಾಯಕ ಮುಖ್ಯೋಪಾಧ್ಯಾಯರಾದ ವಿ.ಇ. ಉಣ್ಣಿಕೃಷ್ಣನ್ ವಂದಿಸಿದರು. ಮಾಧ್ಯಮ ವಿಭಾಗದ ಜೊತೆಕಾರ್ಯದರ್ಶಿ ವಿಜಯನ್ ಮಾಸ್ಟರ್ ಹಾಗೂ ಸಂಘಟಕ ಸಮಿತಿ ಜೊತೆಕಾರ್ಯದರ್ಶಿ ನಾರಾಯಣ ಆಸ್ರ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments

ಜಾಹೀರಾತು

Responsive Advertisement