Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬೆಂಗಳೂರಿನಲ್ಲಿ ಏಳನೇ ದಿನಕ್ಕೆ ಮುಂದುವರಿದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ: 17 ಮಂದಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಏಳನೇ ದಿನಕ್ಕೆ ಕಾಲಿಟ್ಟಿದೆ. ಹಗಲು-ರಾತ್ರಿ ಎನ್ನದೆ ನಡೆಯುತ್ತಿರುವ ಹೋರಾಟ ಇದೀಗ ಕಾರ್ಯಕರ್ತೆಯರ ಆರೋಗ್ಯವನ್ನೇ ಬಲಿಪಡೆಯುತ್ತಿದ್ದು, ಅಸ್ವಸ್ಥಗೊಂಡ 17 ಮಹಿಳೆಯರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರ, ಅಸ್ತಮಾ, ವಾಕರಿಕೆಯಂತಹ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಕಾರ್ಯಕರ್ತೆಯರಿಗೆ ಪ್ರತಿಭಟನಾ ಸ್ಥಳದಲ್ಲಿ ಕುಡಿಯುವ ನೀರು, ಶೌಚಾಲಯ ಹಾಗೂ ವಿಶ್ರಾಂತಿಯಂತಹ ಕನಿಷ್ಠ ಸೌಲಭ್ಯಗಳೂ ಸಮರ್ಪಕವಾಗಿ ಲಭ್ಯವಿಲ್ಲ. ಹಕ್ಕುಗಳಿಗಾಗಿ ಬೀದಿಗಿಳಿದ ಮಹಿಳೆಯರು ಇದೀಗ ಆರೋಗ್ಯದ ಸಂಕಷ್ಟವನ್ನೂ ಎದುರಿಸುವಂತಾಗಿದೆ.

ಪ್ರತಿಭಟನೆ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಮನವಿ ಮಾಡಿ, ಬೇಡಿಕೆಗಳ ಪರಿಶೀಲನೆಗೆ ಭರವಸೆ ನೀಡಿದ್ದಾರೆ. ಆದರೆ, ಮೌಖಿಕ ಆಶ್ವಾಸನೆಗಳಿಗೆ ಮಣಿಯದ ಆಶಾ ಕಾರ್ಯಕರ್ತೆಯರು ಲಿಖಿತ ಆದೇಶ ಬಂದರಷ್ಟೇ ಹೋರಾಟ ಕೈಬಿಡುವುದಾಗಿ ಪಟ್ಟು ಹಿಡಿದಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement