Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಕಟೀಲು ದುರ್ಗಾಪರಮೇಶ್ವರೀ ದೇವಿಯ ದರ್ಶನ ಪಡೆದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಭೇಟಿ ನೀಡಿದರು. ಅವರು  ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ದೇವಳದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಳಿಕ ಅವರು ಶ್ರೀ ಕ್ಷೇತ್ರದ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದು, ನಾಡಿನ ಸುಭಿಕ್ಷೆ, ಶಾಂತಿ, ಸಮೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವು ಭಕ್ತರ ಅಪಾರ ಶ್ರದ್ಧೆ ಮತ್ತು ನಂಬಿಕೆಗೆ ಪಾತ್ರವಾಗಿದೆ. ಇಲ್ಲಿನ ಧಾರ್ಮಿಕ ಪರಂಪರೆ, ಕ್ಷೇತ್ರದ ಮಹಿಮೆ ಹಾಗೂ ಆಧ್ಯಾತ್ಮಿಕ ವಾತಾವರಣ ಭಕ್ತರನ್ನು ಸದಾ ಆಕರ್ಷಿಸುತ್ತಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ದೇವರ ಶೇಷವಸ್ತ್ರ ಹಾಗೂ ಪ್ರಸಾದ ನೀಡಿ ಗೌರವಿಸಲಾಯಿತು.

ಈ ವೇಳೆ ಕಮಲಾದೇವಿಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಸದಾನಂದ ಆಸ್ರಣ್ಣ ಸೇರಿದಂತೆ ದೇವಸ್ಥಾನದ ಪ್ರಮುಖರು ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement