Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಬ್ಯಾಂಕ್‌ನಿಂದ ಸಾಲ ತೆಗೆಸಿಕೊಡದ ದ್ವೇಷದಲ್ಲಿ ಪತ್ನಿಗೆ ಹಲ್ಲೆ ನಡೆಸಿದ ಪತಿ ವಿರುದ್ಧ ಕೇಸು

ಕಾಸರಗೋಡು: ಬ್ಯಾಂಕ್‌ನಿಂದ ಸಾಲ ತೆಗೆಸಿಕೊಡಲಿಲ್ಲ ಎಂಬ ಕಾರಣಕ್ಕೆ 24 ವರ್ಷದ ಪತ್ನಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಪತಿಯ ವಿರುದ್ಧ ಬೇಕಲ ಪೊಲೀಸರು ಕೇಸು ದಾಖಲಿಸಿದ್ದಾರೆ.

ಬೇಕಲದ ಮೌವ್ವಲ್ ಪರಯಂಗಾನ ಜುಮಾ ಮಸೀದಿ ಸಮೀಪದ ನಿವಾಸಿ ಯುವತಿ ನೀಡಿದ ದೂರಿನ ಮೇರೆಗೆ ಪತಿ ರಖೀಬ್ (28) ವಿರುದ್ಧ ಕೇಸು ದಾಖಲಾಗಿದೆ.

ಶನಿವಾರ ಸಂಜೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದೆ. ಬ್ಯಾಂಕ್‌ನಿಂದ ಸಾಲ ತೆಗೆಸಿಕೊಡದ ದ್ವೇಷದಿಂದ ಪತ್ನಿಯನ್ನು ಕೈಹಿಡಿದು ತಡೆದು ನಿಲ್ಲಿಸಿ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಯುವತಿ ಭಾನುವಾರ ಮಧ್ಯಾಹ್ನ ಪೊಲೀಸರಿಗೆ ದೂರು ನೀಡಿದ್ದು, ಬೇಕಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement