Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮೊಟ್ಟೆ ಸಾಗಾಟದ ನೆಪದಲ್ಲಿ ಬೆಳಗಾವಿಯಿಂದ ಕಾಸರಗೋಡಿನ ಕಸಾಯಿಖಾನೆಗೆ ಅಕ್ರಮ ಜಾನುವಾರು ಸಾಗಾಟ : ಇಬ್ಬರ ಬಂಧನ,ಲಾರಿ ವಶ , ಎತ್ತುಗಳ ರಕ್ಷಣೆ


ಮಂಗಳೂರು: ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದು, ಕೇರಳದ ಕಸಾಯಿಖಾನೆಗೆ ಕೊಂಡೊಯ್ಯಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಮಂಗಳೂರು–ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಕಂಕನಾಡಿ ನಗರ ಠಾಣೆಯ ಪೊಲೀಸರು ಪಂಪೈಲ್ ಬಳಿ ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯನ್ನು ತಡೆದು ತಪಾಸಣೆ ನಡೆಸಿದರು.

ಈ ವೇಳೆ ಲಾರಿಯ ಹಿಂಭಾಗದಲ್ಲಿ ಮೊಟ್ಟೆ ಟ್ರೇಗಳನ್ನು ಜೋಡಿಸಿ, ಅದರ ಒಳಭಾಗದಲ್ಲಿ 16 ಎತ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಯಮಕನಮರಡಿಯ ದಸ್ತಗಿರ್ ಅವರಿಗೆ ಸೇರಿದ ಈ ಎತ್ತುಗಳನ್ನು ಮಾಂಸಕ್ಕಾಗಿ ಕೇರಳದ ಕಾಸರಗೋಡಿಗೆ ಸಾಗಿಸಲಾಗುತ್ತಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪ್ರಕರಣದಲ್ಲಿ ಲಾರಿ ಚಾಲಕ ಮೈಸೂರಿನ ರಫೀಕ್ (52) ಹಾಗೂ ರೆಹಮಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ರಕ್ಷಿಸಲಾದ 16 ಎತ್ತುಗಳನ್ನು ಕೋಣಾಜೆಯ ಪಜೀರ್‌ನಲ್ಲಿರುವ ಗೋಶಾಲೆಗೆ ಸ್ಥಳಾಂತರಿಸಲಾಗಿದೆ.

ಈ ಅಕ್ರಮ ಜಾನುವಾರು ಸಾಗಾಟದ ಹಿಂದೆ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಜಾಲದ ಇತರ ಸದಸ್ಯರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Post a Comment

0 Comments

ಜಾಹೀರಾತು

Responsive Advertisement