Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ವಕೀಲರ ಮೇಲಿನ ದೌರ್ಜನ್ಯ, ಹತ್ಯೆ ಖಂಡಿಸಿ ಇಂದು ರಾಜ್ಯವ್ಯಾಪಿ ಪ್ರತಿಭಟನೆ: ಉಡುಪಿ ವಕೀಲರ ಸಂಘದಿಂದ ನ್ಯಾಯಾಲಯ ಕಲಾಪ ಬಹಿಷ್ಕಾರ

ಉಡುಪಿ: ವಕೀಲರ ಮೇಲಿನ ದೌರ್ಜನ್ಯ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ ಉಡುಪಿ ವಕೀಲರ ಸಂಘದ ವತಿಯಿಂದ ಮಂಗಳವಾರ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಉಡುಪಿ ನ್ಯಾಯಾಲಯ ಸಂಕೀರ್ಣದ ಪ್ರವೇಶ ದ್ವಾರದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಇಂದು  ಬೆಳಿಗ್ಗೆ  ನಡೆದ ಪ್ರತಿಭಟನೆಯಲ್ಲಿ ವಕೀಲರ ಮೇಲಿನ ಹಲ್ಲೆ ಮತ್ತು ಹತ್ಯೆ ಪ್ರಕರಣಗಳಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಕರ್ನಾಟಕ ವಕೀಲರ ಮೇಲಿನ ಹಿಂಸಾಚಾರ ನಿಷೇಧ ಕಾಯ್ದೆ-2023 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ವಕೀಲರಿಗೆ ಸಂಪೂರ್ಣ ರಕ್ಷಣೆ ಒದಗಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿತ್ತು.

ರಾಜ್ಯದಲ್ಲಿ ವಕೀಲರ ಮೇಲಿನ ಹಲ್ಲೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಮತ್ತು ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕದಾದ್ಯಂತ ವಕೀಲರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ವಕೀಲ ಮಂಜುನಾಥ್ ಶ್ರೀರಾಮ್ ಹಾಗೂ ಅನ್ನಪೂರ್ಣೇಶ್ವರಿ ನಗರದ ವಕೀಲ ಮಂಜುನಾಥ್ ಅವರ ಹತ್ಯೆ ಮತ್ತು ಗೌರಿಬಿದನೂರಿನಲ್ಲಿ ವಕೀಲ ವೆಂಕಟರಮಣ ಸನ್ನಕ್ಕಿ ಅವರ ಕೊಲೆಗೆ ಯತ್ನಿಸಿದ ಘಟನೆಗಳ ಹಿನ್ನೆಲೆಯಲ್ಲಿ ಈ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಅಕ್ಟೋಬರ್ 29ರಂದು ನಡೆದ ಸಾಮಾನ್ಯ ಸಭೆಯಲ್ಲಿ ನವೆಂಬರ್ 3ರಂದು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿಯಲು ಬೆಂಗಳೂರು ವಕೀಲರ ಸಂಘ ಸರ್ವಾನುಮತದ ನಿರ್ಧಾರ ಕೈಗೊಂಡಿತ್ತು. ರಾಜ್ಯದ ಎಲ್ಲ ವಕೀಲರ ಸಂಘಗಳು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿತ್ತು. ಅದರಂತೆ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಕೀಲರು  ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಹಲವು ನ್ಯಾಯಾಲಯಗಳ ವಿಚಾರಣೆಗಳು ಮುಂದೂಡಿಕೆಯಾಗಿವೆ.


Post a Comment

0 Comments

ಜಾಹೀರಾತು

Responsive Advertisement