Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಮಂಗಳೂರು ರೆಸ್ಟೋರೆಂಟ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳು ವಶಕ್ಕೆ

ಮಂಗಳೂರು: ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟೊಂದರಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೀಚ್ ಸಮೀಪದ ರೆಸ್ಟೋರೆಂಟ್‌ನಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸ್ ನಿರೀಕ್ಷಕರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಇವರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ನಿಟ್ಟಿನಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.

ಪಣಂಬೂರು ಪೊಲೀಸ್ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.

Post a Comment

0 Comments

ಜಾಹೀರಾತು

Responsive Advertisement