Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಕೇರಳದಲ್ಲಿ ಸೆರೆ

ಸುಳ್ಯ: ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

2000 ಸೆಪ್ಟೆಂಬರ್ 10ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುತ್ತಿಗಾರಿನಲ್ಲಿ ಕೆಲಸದ ವಿಚಾರವಾಗಿ ಕೇರಳ ಮೂಲದ ಜೊಯ್, ಶೆಲ್ಟನ್ ಮತ್ತು ಟೋಮಿ ಅಲಿಯಾಸ್ ಥಾಮಸ್ ಎಂಬವರ ನಡುವೆ ಜಗಳ ನಡೆದಿತ್ತು. ಈ ಸಂದರ್ಭದಲ್ಲಿ ಜೊಯ್ ಎಂಬಾತನಿಗೆ ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಟೋಮಿ ಅಲಿಯಾಸ್ ಥಾಮಸ್ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿಯಾಗಿದ್ದ ಕೇರಳದ ತ್ರಿಶೂರ್ ನಿವಾಸಿ ಟೋಮಿ, ಸುಮಾರು 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ನವೆಂಬರ್ 12ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಎಎಸ್‌ಐ ಸ್ಕರಿಯಾ, ಸುಳ್ಯ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಹರೀಶ್ ಹಾಗೂ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಆದ್ರಾಂ ಅವರ ತಂಡ ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

ಬಳಿಕ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನವೆಂಬರ್ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದೆ.

Post a Comment

0 Comments

ಜಾಹೀರಾತು

Responsive Advertisement