Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಪಿಕಪ್ ವಾಹನ ಮತ್ತು ಕಾರು ಪರಸ್ಪರ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಕಡಬ: ಹಣ್ಣುಹಂಪಲು ಸಾಗಿಸುತ್ತಿದ್ದ ಪಿಕಪ್ ವಾಹನ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಆಲಂಕಾರು ಸಮೀಪದ ನೆಕ್ಕರೆಯಲ್ಲಿ ನಡೆದಿದೆ.

ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣುಹಂಪಲು ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರಲ್ಲಿ ಓರ್ವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮತ್ತೊಬ್ಬ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

Post a Comment

0 Comments

ಜಾಹೀರಾತು

Responsive Advertisement